ವಿರುಧುನಗರ: ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸ್ಫೋಟಗೊಂಡಿದ್ದು 11 ಮಂದಿ ಸಾವನ್ನಪ್ಪಿದ್ದರೆ 22 ಮಂದಿಗೆ ಗಾಯಗಳಾಗಿವೆ.
ಫೆ.12 ರಂದು ಮಧ್ಯಾಹ್ನ ಈ ಬಗ್ಗೆ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂ ಈ ಅವಘಡ ನಡೆದಿದ್ದು, ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಸಟ್ಟೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತದೇಹಗಳು ಸಂಪೂರ್ಣ ಸುಟ್ಟಿರುವುದರಿಂದ ಗುರುತು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಘಟನೆ ವರದಿಯಾದ ಬೆನ್ನಲ್ಲೇ ಮೂರು ಅಗ್ನಿಶಾಮಕ ವಾಹನಗಳೊಂದಿಗೆ, 30 ರಕ್ಷಣಾ ಸಿಬ್ಬಂದಿಗಳು ಹಾಗೂ ಐವರು ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಫೋಟದಲ್ಲಿ 10 ಕೋಠಡಿಗಳು ನಾಶವಾಗಿದ್ದು, ಘಟನೆ ನಡೆದಾಗ ಕನಿಷ್ಟ 50 ಮಂದಿ ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗಣೇಶನ್ ಹೇಳಿದ್ದಾರೆ, ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಮೂಲಗಳ ಪ್ರಕಾರ ಯುನಿಟ್ ನ್ನು ಹಲವು ಮಂದಿ ಗುತ್ತಿಗೆದಾರರಿಗೆ ಅಕ್ರಮವಾಗಿ ನೀಡಲಾಗಿದ್ದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಿದ್ದಾರೆ.