ತಿರುವನಂತಪುರ: ಕೇರಳದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಅವಲೋಕನ ನಡೆಸುವ ನಿಟ್ಟಿನಲ್ಲಿ ಕೇಂದ್ರದ ಚುನಾವಣಾ ಆಯೋಗ ಫೆ. 12ರಂದು ಕೇರಳಕ್ಕೆ ಭೇಟಿ ನೀಡಲಿದ್ದು, ಫೆ. 15ರ ವರೆಗೆ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರ, ಚುನಾವಣಾ ಆಯುಕ್ತರಾದ ಸುಶೀಲ್‍ಚಂದ್ರ, ರಾಜೀವ್ ಕುಮಾರ್ ಸೇರಿ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ಪೊಲೀಸ್ ನೋಡೆಲ್ ಅಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು.
ವಿಧಾನಸಭಾ ಚುನಾವಣೆ-12ರಿಂದ ಕೇಂದ್ರ ಚುನಾವಣಾ ಆಯುಕ್ತರ ಪ್ರವಾಸ
0
ಫೆಬ್ರವರಿ 06, 2021
Tags