ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,067 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,08,58,371ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ ಮಹಾಮಾರಿ ವೈರಸ್ 94 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,55,252ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟಾರೆ 1,08,58,371 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 13,087 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,05,61,608ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,41,511 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಭಾರತದಲ್ಲಿ ಒಂದೇ ದಿನ 7,36,903 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 20,33,24,655 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.