HEALTH TIPS

ಕೋವಿಡ್-19: ದೇಶದಲ್ಲಿಂದು 11,610 ಹೊಸ ಕೇಸ್ ಪತ್ತೆ, 100 ಮಂದಿ ಸಾವು


          ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,610 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,09,37,320ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 


      ಒಂದೇ ದಿನ ಮಹಾಮಾರಿ ವೈರಸ್ 100 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,55,913ಕ್ಕೆ ಏರಿಕೆಯಾಗಿದೆ.

       ಈ ನಡುವೆ ಒಟ್ಟಾರೆ 1,09,37,320 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 11,833 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,06,44,858 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,36,549 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

       ಭಾರತದಲ್ಲಿ ಒಂದೇ ದಿನ 7,36,903 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 20,33,24,655 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

       ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

      ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ, 89,99,230 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries