ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 9,121 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.09 ಕೋಟಿ ಗಡಿದಾಟಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 9,121 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,09,25,710ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ದೇಶಾದ್ಯಂತ 11,805 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 1,06,33,025 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ1,36,872 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 81 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾಗೆ ಬಲಿಯಾದ ಸೋಂಕಿತರ ಸಂಖ್ಯೆ 1,55,813 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ6 ,15 664 ಕೋವಿಡ್-19 ಪರೀಕ್ಷೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6 ,15 664 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜ.2ರವರೆಗೂ 20,73,32,298 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.