HEALTH TIPS

ಕೋವಿಡ್-19: 8 ಸಾವಿರದಿಂದ ಎರಡು ದಿನಗಳಲ್ಲಿ 12,899 ಪ್ರಕರಣಕ್ಕೆ ಏರಿಕೆ, 24 ಗಂಟೆಗಳಲ್ಲಿ 107 ಮಂದಿ ಸಾವು

       ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,899 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,07,90,183ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

       ಕಳೆದ 24 ಗಂಟೆಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ 107 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 1,54, 703ಕ್ಕೆ ಏರಿಕೆಯಾಗಿದೆ.

       ಈ ನಡುವೆ ಒಟ್ಟಾರೆ 1,07,90,183 ಮಂದಿ ಸೋಂಕಿತರ ಪೈಕಿ 1,04,80,455 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 1,55,025 ಮಂದಿ ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

      ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೆ ಒಟ್ಟಾರೆ, 44,49,552 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries