ನವದೆಹಲಿ: ಭಾರತದಲ್ಲಿ ಕೋವಿಡ್-19 ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕೆ(ಇಯುಎ) ಸಲ್ಲಿಸಲಾಗಿರುವ ಅರ್ಜಿಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿರುವುದಾಗಿ ಫಾರ್ಮ ಕಂಪೆನಿ ಫಿಜರ್ ಶುಕ್ರವಾರ ಹೇಳಿದೆ.
ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಭಾರತದಲ್ಲಿ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ಗೆ ಕೋರಿದ್ದ ಮೊದಲ ಫಾರ್ಮಕ್ಯುಟಿಕಲ್ ಕಂಪೆನಿ ಫಿಜರ್ ಆಗಿತ್ತು. ಅದಕ್ಕೆ ಇಂಗ್ಲೆಂಡ್ ಮತ್ತು ಬಹ್ರೈನ್ ನಲ್ಲಿ ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ.
ತನ್ನ ಕೋವಿಡ್-19 ಲಸಿಕೆಯ ತುರ್ತು ಬಳಕೆಯ ದೃಢೀಕರಣದ ಅನುಸಾರವಾಗಿ, ಫಿಜರ್ ಮೊನ್ನೆ 3ರಂದು ಭಾರತದ ಔಷಧ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಭಾಗವಹಿಸಿತು. ಸಭೆಯಲ್ಲಿನ ಚರ್ಚೆಗಳು ಮತ್ತು ನಿಯಂತ್ರಕರಿಗೆ ಅಗತ್ಯವಿರುವ ಹೆಚ್ಚುವರಿ ಮಾಹಿತಿಯ ತಿಳುವಳಿಕೆಯ ಆಧಾರದ ಮೇಲೆ, ಕಂಪನಿಯು ಈ ಸಮಯದಲ್ಲಿ ತನ್ನ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ಕಂಪೆನಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಫಿಜರ್ ಪ್ರಾಧಿಕಾರದೊಂದಿಗೆ ಸಹಯೋಗವನ್ನು ಮುಂದುವರಿಸುತ್ತದೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚುವರಿ ಮಾಹಿತಿಯೊಂದಿಗೆ ಅದರ ಅನುಮೋದನೆ ಮತ್ತೆ ಅರ್ಜಿ ಸಲ್ಲಿಸುತ್ತದೆ ಎಂದು ಕಂಪೆನಿ ವಕ್ತಾರರು ತಿಳಿಸಿದ್ದಾರೆ.