ಪೆರ್ಲ: ಕಾಟುಕುಕ್ಕೆ ಸಮೀಪದ ಮೊಗೇರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಮಾ.19 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಮಾ.18 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ, ಗಣಪತಿ ಪೂಜನ, ಪುಣ್ಯಾಹ ವಾಚನ, ಮಾತೃಕಪೂಜನ, ದೇವನಾಂದಿ, ಪ್ರಾಕಾರ ಶುದ್ದಿ, ದ್ವಾದಶ ನಾರೀಕೇಳ ಗಣಪತಿ ಹವನ, ಸೀಯಾಳಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ತಂಬಿಲ ಸೇವೆ, ದೈವಗಳ ಆರಾಧನೆ ನಡೆಯಲಿದೆ. ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಮಾ.19 ರಂದು ಬೆಳಿಗ್ಗೆ 7 ರಿಂದ ದೇವತಾ ಪ್ರಾರ್ಥನೆ, ಗಣಪತಿ ಪೂಜನ, ಪುಣ್ಯಾಹ ವಾಚನ, ನವಕಕಲಶಾಭಿಷೇಕ, ಚಂಡಿಕಾ ಹವನ ಆರಂಭ, ಮಧ್ಯಾಹ್ನ 12 ರಿಂದ ಚಂಡಿಕಾ ಹವನದ ಪೂರ್ಣಾಹುತಿ, ಮಹಾಪೂಜೆ, ಪಲ್ಲಕಿ ಉತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅಪರಾಹ್ನ 4 ರಿಂದ ಮೊಗೇರು ಶ್ರೀದುರ್ಗಾಪರಮೇಶ್ವರಿ ಭಜನಾ ಸಮಿತಿಯಿಂದ ಭಜನಾ ಸಂಕೀರ್ತನೆ, ರಾತ್ರಿ 7.30 ರಿಂದ ನಿತ್ಯಪೂಜೆ, ಪ್ರಸಾದ ಭೋಜನ, ರಾತ್ರಿ 8 ರಿಂದ ವಿಶೇಷ ಹೂವಿನ ಪೂಜೆ, ರಂಗಪೂಜೆ, ಮಹಾಪೂಜೆ, ಪಲ್ಲಕ್ಕಿ ಉತ್ಸವ, ವಸಂತಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಮಾ.20 ರಂದು ಬೆಳಿಗ್ಗೆ 9 ರಿಂದ ನವಕಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಸಂಪನ್ನಗೊಳ್ಳಲಿದೆ.