"ಇಂಧನ ದರ ಏರಿಕೆ ಮತ್ತು ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಇ-ವೇ ಬಿಲ್ ಕಾನೂನುಗಳ ವಿರುದ್ಧ ಎಐಟಿಡಬ್ಲ್ಯುಎ ಕರೆ ನೀಡಿರುವ ಒಂದು ದಿನದ ಸಾರಿಗೆ ಅಸಹಕಾರಕ್ಕೆ ಎಲ್ಲ ರಾಜ್ಯಮಟ್ಟದ ಸಾರಿಗೆ ಸಂಘಗಳು ಬೆಂಬಲ ದೃಢಪಡಿಸಿವೆ.
ಪ್ರತಿಭಟನೆಯ ಸ್ವರೂಪ ಎಲ್ಲ ಬುಕ್ಕಿಂಗ್ ತಿರಸ್ಕರಿಸುವುದು ಮತ್ತು ಇ-ವೇ ಬಿಲ್ ಕೇಂದ್ರಿತ ಸರಕುಗಳ ಸಾಗಾಣಿಕೆಯನ್ನು ಒಂದು ದಿನ ತಿರಸ್ಕರಿಸಲು ತೀರ್ಮಾನಿಸಲಾಗಿದೆ. ಎಲ್ಲ ಸಾರಿಗೆ ಕಂಪನಿಗಳು ಸಾಂಕೇತಿಕ ಪ್ರತಿಭಟನಾರ್ಥವಾಗಿ ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ಟ್ರಕ್ ಗಳನ್ನು ನಿಲ್ಲಿಸಲು ಕೋರಲಾಗಿದೆ. ಎಲ್ಲ ಸಾರಿಗೆ ಗೋದಾಮುಗಳು ಪ್ರತಿಭಟನೆ ಬ್ಯಾನರ್ ಗಳನ್ನು ಪ್ರದರ್ಶಿಸಲಿವೆ.
2021ರ ಫೆಬ್ರುವರಿ 26ರಂದು ಯಾವುದೇ ಸರಕು ಸಾಗಾಣಿಕೆ ಬುಕ್ಕಿಂಗ್ ಮಾಡದಂತೆ ಅಥವಾ ಲೋಡ್ ಮಾಡದಂತೆ ಎಲ್ಲ ಗ್ರಾಹಕರಿಗೆ ಸಾರಿಗೆ ಕಂಪನಿಗಳು ಮನವಿ ಮಾಡಿಕೊಳ್ಳಲಿವೆ" ಎಂದು ಎಐಟಿಡಬ್ಲ್ಯುಎ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ಆರ್ಯ ಹೇಳಿದ್ದಾರೆ.