ನವದೆಹಲಿ:ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಯುವತಿಯ ಸಾವು ಪ್ರಕರಣದ ಬಗ್ಗೆ ವರದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಬಂಧಿಸಲ್ಪಟ್ಟಿದ್ದ ಕೇರಳದ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸುಪ್ರೀಂಕೋರ್ಟ್ ಐದು ದಿನಗಳ ಕಾಲ ಷರತ್ತುಬದ್ಧ ಜಾಮೀನು ನೀಡಿದೆ
ಭೇಟಿಯ ಸಮಯದಲ್ಲಿ, ಅವರು ಮಾಧ್ಯಮಗಳೊಂದಿಗೆ ಮಾತನಾಡಬಾರದು ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಬಾರದು. ಸಂಬಂಧಿಕರು, ವೈದ್ಯರು ಮತ್ತು ಅವರ ತಾಯಿಯನ್ನು ಹೊರತುಪಡಿಸಿ ಬೇರೆ ಯಾರನ್ನೂ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಸಿದ್ದೀಕ್ ಕಪ್ಪನ್ ರ ಬೆಂಗಾವಲು ಮತ್ತು ಪ್ರಯಾಣ ವ್ಯವಸ್ಥೆ ಮಾಡುವುದು ಯುಪಿ ಪೊಲೀಸರ ಜವಾಬ್ದಾರಿಯಾಗಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಈ ಮೊದಲು, ತಾಯಿಯೊಂದಿಗೆ ವೀಡಿಯೊ ಕರೆ ಮೂಲಕ ಮಾತನಾಡಲು ಸಿದ್ದೀಕ್ ಕಾಪ್ಪನ್ ರಿಗೆ ಅವಕಾಶವಿತ್ತು.