ಕಾಸರಗೋಡು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಘಟಕದ ಉದ್ಘಾಟನೆ, ಕೇರಳ ಕನ್ನಡ ಪತ್ರಕರ್ತರ ಸಮಾವೇಶ ಮಾ. 7ರಂದು ಬೆಳಗ್ಗೆ 9.30ಕ್ಕೆ ಶಿರಿಯ ಸಮೀಪದ ಡಿ.ಎಂ. ಕಬಾನಾ ರೆಸಾರ್ಟ್‍ನಲ್ಲಿ ಜರುಗಲಿದೆ.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಸೋಮಶೇಖರ್ ಐ,ಎ.ಎಸ್ ಉದ್ಘಾಟಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ಈ ಸಂದರ್ಭ ಪತ್ರಕರ್ತರಿಗಾಗಿ ನೀಡಲಾಗುವ ಆರೋಗ್ಯ ಕಾರ್ಡನ್ನು ಕುಂಬಳೆಯ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಅಧ್ಯಕ್ಷ ಎ. ಚಂದ್ರಶೇಖರನ್ ಬಿಡುಗಡೆಗೊಳಿಸುವರು.
ಜಿಪಂ ಸದಸ್ಯ ಗೋಲ್ಡನ್ ಅಬ್ದುಲ್ ರಹಮಾನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದ.ಕ ಜಿಲ್ಲಾ ಘಟಕ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಹಾರಾಷ್ಟ್ರ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭದಲ್ಲಿ ಮಲಾರ್ ಜಯರಾಮ ರೈ, ಟಿ.ಶಂಕರನಾರಾಯಣ ಭಟ್, ಭಾಸ್ಕರ ಕೆ, ಕಿದೂರು ಶಂಕರನಾರಾಯಣ ಭಟ್, ರಾಧಾಕೃಷ್ಣ ಉಳಿಯತ್ತಡ್ಕ ಹಾಗೂ ದೇವದಾಸ್ ಪಾರೆಕಟ್ಟ ಅವರನ್ನು ಗೌರವಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರಗಲಿರುವುದು.