ನವದೆಹಲಿ: 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡುವಂತೆ ಹಣಕಾಸು ಸಚಿವರು ಘೋಷಿಸಿದ್ದಾರೆ.
ಎಪ್ಪತ್ತೈದು ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆದಾಯ ತೆರಿಗೆ ರಿಟರ್ನ್ ಅಗತ್ಯವಿಲ್ಲ. ಈ ವಿನಾಯಿತಿ ಪಿಂಚಣಿ ಮತ್ತು ಬಡ್ಡಿ ಆದಾಯ ಹೊಂದಿರುವವರಿಗೆ ಮಾತ್ರ ಲಭ್ಯವಿದೆ. ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂದರ್ಭದಲ್ಲಿ ಇದನ್ನು ಘೋಷಿಸಲಾಗಿದೆ ಎಂದು ವಿತ್ತ ಸಚಿವರು ಹೇಳಿದರು.