ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎಂ.ಶಿವಶಂಕರ್‍ಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದೆ.
ಎಂ.ಶಿವಶಂಕರ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ತನಿಖೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದೆ. ಈವರೆಗೆ ನಡೆದ ತನಿಖೆಯಲ್ಲಿ ಶಿವಶಂಕರ್ ವಿರುದ್ಧ ಬಲವಾದ ಪುರಾವೆಗಳಿವೆ ಎಂದು ಜಾರಿ ನಿರ್ದೇಶನಾಲಯವು ಅರ್ಜಿಯಲ್ಲಿ ತಿಳಿಸಿದೆ.
ಕಸ್ಟಮ್ಸ್ ಮತ್ತು ಇಡಿ ದಾಖಲಿಸಿದ ಮೂರು ಪ್ರಕರಣಗಳಲ್ಲಿ ಜಾಮೀನು ಪಡೆದ ನಂತರ ಶಿವಶಂಕರ್ ಅವರನ್ನು ಮಾರ್ಚ್ 3 ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.
ಶಿವಶಂಕರ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯದ ಕೊಚ್ಚಿ ವಲಯ ಕಚೇರಿಯ ಸಹಾಯಕ ನಿರ್ದೇಶಕರು ಸುಪ್ರೀಂ ಕೋರ್ಟ್ ನ್ನು ಸಂಪರ್ಕಿಸಿದ್ದಾರೆ.