ಕಾಸರಗೋಡು: ಪೆರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಸೋಮವಾರ ಜರುಗಿತು. 99 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಕಂದಾಯ ಸಚಿವ ಇ.ಚಂದ್ರಶೇಖರನ್ ಉದ್ಘಾಟಿಸಿದರು. ಶಾಸಕ ಕೆ.ಕುಂಞÂ್ಞ ರಾಮನ್ ಅಧ್ಯಕ್ಷತೆ ವಹಿಸಿದ್ದರು. ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಜಿಲ್ಲಾ ಪಂಚಾಯತ್ ಸದಸ್ಯೆ ಫಾತಿಮತ್ ಷಂನಾ, ಪುಲ್ಲೂರು-ಪೆರಿಯ ಗ್ರಾಮ ಪಂಚಾಯತ್ ಸ್ಥಾಯೀ ಸಮಿತಿ ಸದಸ್ಯೆ ವಿ.ವಿ.ಸುಮಾ, ಸಾರವಜನಿಕ ಶಿಕ್ಷಣ ಸಂರಕ್ಷಣೆ ಯಜ್ಞ ಜಿಲ್ಲಾ ಸಂಚಾಲಕ ಪಿ.ದಿಲೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಪಿ.ಎಂ.ಸತ್ಯನ್ ಸ್ವಾಗತಿಸಿದರು. ಸೀನಿಯರ್ ಅಸಿಸ್ಟೆಂಟ್ ಕೆ.ಕೆ.ಶ್ಯಾಮಲಾ ವಂದಿಸಿದರು.