ಮುಂಬೈ: ಕ್ಯಾಬಿನ್‌ನಲ್ಲಿ ಹೊಗೆ ಕಂಡುಬಂದ ಹಿನ್ನೆಲೆಯಲ್ಲಿ ಸ್ಪೈಸ್‌ಜೆಟ್ ವಿಮಾನ ಕೋಲ್ಕತ್ತಾದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಘಟನೆ ನಡೆದಿದೆ. ಇಂದು ಸಂಜೆ 4.30 ಕ್ಕೆ ಈ ಘಟನೆ ನಡೆದಿದ್ದು, ಕೋಲ್ಕತ್ತಾದಿಂದ ಪಶ್ಚಿಮ ಬಂಗಾಳದ ಬಾಗ್ದೋಗ್ರಾಕ್ಕೆ ಹಾರಾಟ ನಡೆಸುತ್ತಿದ್ದ ವಿಮಾನವನ್ನು ಬೇರೆಡೆಗೆ ತಿರುಗಿಸಲಾಯಿತು.
ವಿಮಾನ ಟೇಕಾಫ್ ಆದ ಕೂಡಲೇ ಕ್ಯಾಬಿನ್ ಸಿಬ್ಬಂದಿ ಕ್ಯಾಬಿನ್‌ನಲ್ಲಿ ಬೆಂಕಿಯನ್ನು ಗಮನಿಸಿದರು. ಕ್ಯಾಬಿನ್‌ನಲ್ಲಿ ಹೊಗೆಯಿಂದಾಗಿ ವಿಮಾನ ತುರ್ತು ಲ್ಯಾಂಡಿಂಗ್ ಮಾಡುತ್ತಿದೆ ಎಂದು ಪೈಲಟ್ ನಂತರ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ತಿಳಿಸಿದರು.