ಕಾಸರಗೋಡು: ಬಸ್ ಪ್ರಯಾಣದಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕಾಸರಗೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಗೆ ಇಂತಹದೊಂದು ಅನುಭವವಾಗಿದ್ದು, ಆ ವಿದ್ಯಾರ್ಥಿ ನಗ್ನ ಪ್ರದರ್ಶನದ ಆಟೋಪಗಳ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಪೆÇೀಸ್ಟ್ ಮಾಡಿರುವುದು ಸಂಚಲನ ಸೃಷ್ಟಿಸಿದೆ.
ಎರಡನೇ ವರ್ಷದ ಪದವೀಧರ ವಿದ್ಯಾರ್ಥಿನಿ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿಯ ಪಕ್ಕದಲ್ಲಿ ನಿಲ್ಲಿಸಿದ್ದ ಕರ್ನಾಟಕ ರಾಜ್ಯ ಸಾರಿಗೆ ಬಸ್‍ನಲ್ಲಿ ಕುಳಿತಿದ್ದ ಮಧ್ಯವಯಸ್ಕ ವ್ಯಕ್ತಿಯೊಬ್ಬ ಅಶ್ಲೀಲತೆ ಪ್ರದರ್ಶಿಸಿ ದೌರ್ಜನ್ಯ ಎಸಗಿದ್ದಾನೆ.
ವಿದ್ಯಾರ್ಥಿನಿ ತಕ್ಷಣ ತನ್ನ ಪೋನ್‍ನಲ್ಲಿ ದೃಶ್ಯಗಳನ್ನು ಚಿತ್ರೀಕರಿಸಿ ಬಳಿಕ ಇಸ್ಟಾಗ್ರಾಂ ನಲ್ಲಿ ಪೆÇೀಸ್ಟ್ ಮಾಡಿದ್ದಳು. ಘಟನೆಯ ಬಗ್ಗೆ ವಿದ್ಯಾರ್ಥಿನಿ ಪೋಲೀಸರಿಗೆ ದೂರು ನೀಡಿದ್ದಾಳೆ. ಸೋಶಿಯಲ್ ಮೀಡಿಯಾದಲ್ಲಿ ಬಾಲಕಿಯನ್ನು ಬೆಂಬಲಿಸಿ ಅನೇಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.