ನವದೆಹಲಿ: ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಗೋ ವಿಜ್ಞಾನ ಪರೀಕ್ಷೆಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲಾ ವಿವಿಗಳಿಗೆ ಕರೆ ನೀಡಿದೆ.
ಕಾಮಧೇನು ಗೋ ವಿಜ್ಞಾನ ಪ್ರಚಾರ-ಪ್ರಸಾರ ಪರೀಕ್ಷೆ ನೋಂದಣಿ ಶುಲ್ಕ ರಹಿತವಾಗಿದ್ದು, ಫೆ.25 ರಂದು ಆನ್ ಲೈನ್ ಮೂಲಕ ದೇಶಾದ್ಯಂತ ನಡೆಯಲಿದೆ. ಗೋ ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸುವುದಕ್ಕಾಗಿ ರಾಷ್ಟ್ರೀಯ ಮಟ್ಟದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ರಾಷ್ಟ್ರೀಯ ಕಾಮಧೇನು ಆಯೋಗ (ಆರ್ ಕೆಎ) ದಿಂದ ನಡೆಸಲಾಗುತ್ತಿರುವ ಈ ಪರೀಕ್ಷೆಯಲ್ಲಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಹಿರಿಯ-ಮಾಧ್ಯಮಿಕ ಶಾಲೆಗಳ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ವಿದ್ಯಾರ್ಥಿಗಳಷ್ಟೇ ಅಲ್ಲದೇ ಸಾರ್ವಜನಿಕರೂ ಸಹ ಈ ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾಗಿದ್ದು, ಒಂದು ಗಂಟೆ ಕಾಲ ನಡೆಯಲಿರುವ ಪರೀಕ್ಷೆ 11 ಪ್ರಾದೇಶಿಕ ಭಾಷೆ ಹಾಗೂ ಇಂಗ್ಲೀಷ್ ಗಳಲ್ಲಿ ಲಭ್ಯವಿದೆ. ಹಸುಗಳ ಸಂರಕ್ಷಣೆ, ಸಂರಕ್ಷಣೆ, ರಕ್ಷಣೆ ಮತ್ತು ಅಭಿವೃದ್ಧಿಯ ಉದ್ದೇಶದಿಂದ ಗೋ ಆಯೋಗವನ್ನು ಸರ್ಕಾರ ರಚಿಸಿತ್ತು.
ಇಂಗ್ಲೀಷ್, ಹಿಂದಿ, ಗುಜರಾತಿ, ಸಂಸ್ಕೃತ, ಪಂಜಾಬಿ, ಮರಾಠಿ, ಕನ್ನಡ, ಮಲಯಾಳಂ, ತಮಿಳು, ತೆಲುಗು, ಒಡಿಯಾ ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.