ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಮುನ್ನುಡಿಯಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಸಹಾಯ ಮಾಡಲು ಇಬ್ಬರು ಐಎಎಸ್ ಅಧಿಕಾರಿಗಳನ್ನು ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿಗಳಾಗಿ ನೇಮಿಸಲಾಗಿದೆ. ಪತ್ತನಂತಿಟ್ಟು ಜಿಲ್ಲಾಧಿಕಾರಿ ಪಿ.ಬಿ ನೂಹ್ ಮತ್ತು ಪಾಲಕ್ಕಾಡ್ ಜಿಲ್ಲಾಧಿಕಾರಿ ಡಿ. ಬಾಲಮುರಳಿ ಅವರನ್ನು ನೇಮಿಸಲಾಗಿದೆ.
ಕೊರೋನಾ ವ್ಯಾಪಕತೆಯ ಸಂದರ್ಭದಲ್ಲಿ ಚುನಾವಣೆಗಳು ದೊಡ್ಡ ಸವಾಲಾಗಲಿವೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆಗೆ ಸಹಕರಿಸಲು ಹೆಚ್ಚಿನ ಐಎಎಸ್ ಅಧಿಕಾರಿಗಳನ್ನು ನೇಮಿಸುವಂತೆ ಮುಖ್ಯ ಚುನಾವಣಾ ಆಯುಕ್ತ ಟೀಕಾರಮ್ ಮೀನಾ ಕೇಂದ್ರ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರವನ್ನು ಕೋರಿದ್ದರು. ಇದರ ಬೆನ್ನಲ್ಲೇ ಸರ್ಕಾರಿ ಅಧಿಕಾರಿಗಳ ನೇಮಕ ನಡೆದಿದೆ.
ಇತರ ರಾಜ್ಯಗಳಲ್ಲಿ, ಮುಖ್ಯ ಚುನಾವಣಾ ಆಯುಕ್ತರಿಗೆ ಸಹಾಯ ಮಾಡಲು ಮೂವರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ.