ಮಂಜೇಶ್ವರ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಮಂಜೇಶ್ವರ ಉಪ ಜಿಲ್ಲಾ ಘಟಕದ ಮಹಾಸಭೆಯು ಫೆ. 27 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಕಾಸರಗೋಡು ಇದರ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ ರಾವ್ ಪಿ. ಬಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಕೋಶಾಧಿಕಾರಿ ಪದ್ಮಾವತಿ ಎಂ, ಸದಸ್ಯರಾದ ಜಬ್ಬಾರ್ ಬಿ, ಅಶೋಕ್ ಕುಮಾರ್ ಕೊಡ್ಲಮೊಗರು, ಮಂಜೇಶ್ವರ ಉಪ ಜಿಲ್ಲಾ ಸಮಿತಿಯ ಉಪಾಧ್ಯಕ್ಷೆ ಸುನಿತಾ, ಸದಸ್ಯರಾದ ಪುಷ್ಪಲತಾ ಎ, ಶ್ರೀರಾಮ ಕೆದುಕೋಡಿ, ವಸಂತ ಎಂ ಉಪಸ್ಥಿತರಿದ್ದರು. ಮಂಜೇಶ್ವರ ಉಪ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಕೋಶಾಧಿಕಾರಿ ಜೀವನ್ ಕುಮಾರ್ ವಂದಿಸಿದರು. ಫೆ. 27 ರಂದು ಬೆಳಗ್ಗೆ 9:30 ಕ್ಕೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಮಂಜೇಶ್ವರ ಉಪ ಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಕೆ ಧ್ವಜಾರೋಹಣಗೈಯುವ ಮೂಲಕ ಆರಂಭವಾಗಲಿದ್ದು, ನಿವೃತ್ತ ಶಿಕ್ಷಣ ಉಪನಿರ್ದೇಶಕರಾದ ಶ್ರೀನಿವಾಸ ಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಎಲ್ಲಾ ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಲು ಕರೆ ನೀಡಲಾಗಿದೆ.