ನವದೆಹಲಿ: ಪಿಸ್ತೂಲ್ ನಿಂದ ತಾನೇ ಗುಂಡು ಹಾರಿಸಿಕೊಂಡು 81 ವರ್ಷದ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ದೆಹಲಿಯ ಡಿಪೆನ್ಸ್ ಕಾಲೋನಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ರಂಜಿತ್ ಸೆಥಿ ಆತ್ಮಹತ್ಯೆ ಮಾಡಿಕೊಂಡವರು. ಹೆಚ್ಚು ದಿನ ಬದುಕಲು ಇಷ್ಟವಿಲ್ಲ ಎಂದು ಸೂಸೈಡ್ ನೋಟ್ ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ 7.25ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ತನ್ನ ಕೊಠಡಿಯಲ್ಲೇ ಗುಂಡು ಹಾರಿಸಿಕೊಂಡು ಸೆಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಮೊಲ್ ಚಂದ್ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಡಿಸಿಪಿ ಅತುಲ್ ಕುಮಾರ್ ಠಾಕೂರ್ ಹೇಳಿದ್ದಾರೆ.
ಧೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬಿಎಲ್ ಕಪೂರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು ಎಂಬುದು ತಿಳಿದುಬಂದಿದೆ. ಮುಂದಿನ ವಿಚಾರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.