ನವೆದಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರು ಬದಲಾವಣೆಯ ಪ್ರಸ್ತಾವ ಇಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ.
ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರನ್ನು ಬದಲಾವಣೆ ವಿಚಾರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಳೆದ ವರ್ಷ ಪ್ರಸ್ತಾಪಿಸಿದ್ದರು.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿಶಾಂಕ್, ದೆಹಲಿಯಲ್ಲಿನ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದರು.
ಯುವ ಜನತೆಗೆ ಸ್ಫೂರ್ತಿಯ ಚಿಲುಮೆಯಂತಿದ್ದ ವಿವೇಕನಾಂದರ ಹೆಸರನ್ನು ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಇಡಬೇಕೆಂದು ಸಿ.ಟಿ. ರವಿ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಟ್ವೀಟ್ ಮಾಡಿದ್ದರು.