ಕಾಸರಗೋಡು: ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಅಳವಡಿಸಿ ಪಡ್ರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಆಡಳಿತಾನುಮತಿ ನೀಡಲಾಗಿದೆ. 6 ತರಗತಿ ಕೊಠಡಿಗಳ ಸಹಿತ ಎರಡು ಅಂತಸ್ತಿನ ಕಟ್ಟಡಕ್ಕೆ 1.60 ಕೋಟಿ ರೂ. ಮೀಸಲಿರಿಸಲಾಗಿದೆ. ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ಸಹಿತ ಸೌಲಭ್ಯಗಳು ನೂತನ ಕಟ್ಟಡದಲ್ಲಿ ಇರುವುವು. ಒಂದು ವರ್ಷದ ಅವಧಿಯಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶ್ವ? ಅಧಿಕಾರಿ ಇ.ಪಿ.ರಾಜ್ ಮೋಹನ್ ತಿಳಿಸಿರುವರು.
ಪಡ್ರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಆಡಳಿತಾನುಮತಿ
0
ಫೆಬ್ರವರಿ 05, 2021
Tags