ಕಾಸರಗೋಡು: ವಿಶ್ವ ಕ್ಯಾನ್ಸರ್ ದಿನಾಚರಣೆಯ ಕಾಸರಗೋಡು ಜಿಲ್ಲಾ ಮಟ್ಟದ ಕಾರ್ಯಕ್ರಮ ಅಂಗವಾಗಿ ಗುರುವಾರ ಜನಜಾಗೃತಿ ಕಾರ್ಯಕ್ರಮ ಮತ್ತು ವಿಚಾರಸಂಕಿರಣ ಕಯ್ಯೂರು ಕುಟುಂಬ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಶಾಸಕ ಎಂ.ರಾಜಗೋಪಾಲನ್ ಉದ್ಘಾಟಿಸಿದರು. ಕಯ್ಯೂರು-ಚೀಮೇನಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಪಿ.ವತ್ಸಲನ್ ಅಧ್ಯಕ್ಷತೆ ವಹಿಸಿದ್ದರು. ಕಿರಿಯ ಆಡಳಿತ ವೈದ್ಯಾಧಿಕಾರಿ ಡಾ.ನಿರ್ಮಲ್ ಪ್ರಧಾನ ಭಾಷಣ ಮಾಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಶಶಿಧರನ್, ಪಿ.ಲೀಲಾ, ಎಂ.ಪ್ರಶಾಂತ್, ಜಿಲ್ಲಾ ಮಾಸ್ ಮೀಡಿಯಾ ಅಧಿಕಾರಿ ಎಸ್.ಸಯನಾ ಮೊದಲಾದವರು ಉಪಸ್ಥಿತರಿದ್ದರು. ಪರಿಣತರು ಉಪನ್ಯಾಸ ನಡೆಸಿದರು.
, ವಿಶ್ವ ಕ್ಯಾನ್ಸರ್ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮ
0
ಫೆಬ್ರವರಿ 05, 2021
Tags