ಕಣ್ಣೂರು: ಕಣ್ಣೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಮುಖ್ಯಮಂತ್ರಿ- ವಿದ್ಯಾರ್ಥಿ ಪ್ರಶ್ನೋತ್ತರ ಸಂವಾದ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಭಾಗವಹಿಸುವಿಕೆ ನಿಷೇಧಿಸಲಾಗಿದೆ. ಉದ್ಘಾಟನಾ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳು ತೆರಳುವಂತೆ ಸೂಚನೆ ನೀಡಲಾಗಿದೆ.
ಪ್ರಶ್ನೆ ಕೇಳಿದ ವಿದ್ಯಾರ್ಥಿಯನ್ನು ಮುಖ್ಯಮಂತ್ರಿ ಗದರಿಸಿದ್ದ ಘಟನೆ ಇತ್ತೀಚೆಗೆ ನಡೆದು ವಿವಾದವಾಗಿತ್ತು. ಕಣ್ಣೂರಲ್ಲಿ ಸೋಮವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಎಂಎಸ್‍ಎಫ್ ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರತಿಭಟನೆ ನಡೆಸುವರೆಂದು ತಿಳಿದುಬಂದಿದೆ.