HEALTH TIPS

ಕೋವ್ಯಾಕ್ಸ್ ಅಡಿಯಲ್ಲಿ ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ

       ವಿಶ್ವಸಂಸ್ಥೆ: ಕೋವಿಡ್ 19 ನಿಯಂತ್ರಣಕ್ಕಾಗಿ ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿದೆ ಎನ್ನಲಾಗಿದೆ.

      ಈ ಬಗ್ಗೆ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕೋವಿಡ್–19 ನಿಯಂತ್ರಣದ ನಿಟ್ಟಿನಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯನ್ನು ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ ಎನ್ನಲಾಗಿದೆ.

       ಖ್ಯಾತ ಅಂತಾರಾಷ್ಟ್ರೀಯ ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಜಂಟಿಯಾಗಿ ಈ ಲಸಿಕೆಯನ್ನು ತಯಾರಿಸಿದ್ದು, ಭಾರತದಲ್ಲಿ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

       ವಿಶ್ವಸಂಸ್ಥೆ ಜಾರಿಗೆ ತಂದಿರುವ ಕೋವ್ಯಾಕ್ಸ್  ಕಾರ್ಯಕ್ರಮದ ಅಡಿಯಲ್ಲಿ ಜಗತ್ತಿನ ವಿವಿಧ ದೇಶಗಳಿಗೆ ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಪ್ರಮುಖವಾಗಿ ವಿಶ್ವಸಂಸ್ಥೆ ಅಸ್ಟ್ರಾಜೆನೆಕಾ ಲಸಿಕೆಯನ್ನು ಹೆಚ್ಚಾಗಿ ವಿತರಣೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿದ್ದು, ಇತರೆ ಲಸಿಕೆಗಳಿಗೆ ಹೋಲಿಸಿದರೆ ಅಸ್ಟ್ರಾಜೆನೆಕಾ ಲಸಿಕೆ ಕಡಿಮೆ ಬೆಲೆಯಲ್ಲಿ  ಲಭ್ಯವಿದೆ ಮತ್ತು ನಿರ್ವಹಣೆಯು ಸರಳವಾಗಿದೆ. 8 ರಿಂದ 12 ವಾರಗಳಲ್ಲಿ 2 ಡೋಸ್‌ ಲಸಿಕೆ ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

      ಈ ಕುರಿತಂತೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಗೆಬ್ರೆಯೆಸುಸ್‌ ಅವರು, 'ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು ಲಸಿಕೆಗಳನ್ನು ವೇಗವಾಗಿ ವಿತರಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries