ಕೊಚ್ಚಿ: ಡಾಲರ್ ಕಳ್ಳಸಾಗಣೆ ಪ್ರಕರಣದಲ್ಲಿ ಸಿ.ಎಂ. ರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಬುಧವಾರಕ್ಕೆ ಮುಂದೂಡಲಾಗಿದೆ.
ಕಸ್ಟಮ್ಸ್ ಮತ್ತು ಇಡಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಈ ಹಿಂದೆ ಜಾಮೀನು ಪಡೆದಿದ್ದ ಶಿವಶಂಕರ್ ಡಾಲರ್ ಕಳ್ಳಸಾಗಣೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆಯಿದೆ.
ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿದ ಹೆಚ್ಚುವರಿ ಸಿಜೆಎಂ ನ್ಯಾಯಾಲಯವು ಈ ಅರ್ಜಿಯನ್ನು ಆಲಿಸಿದೆ. ತನಗೆ ಡಾಲರ್ ಕಳ್ಳಸಾಗಣೆಗೆ ಯಾವುದೇ ಸಂಬಂಧವಿಲ್ಲ ಮತ್ತು ಅಲ್ಲದೆ ತನ್ನ ವಿರುದ್ಧ ಯಾವುದೇ ಪುರಾವೆಗಳನ್ನು ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಶಿವಶಂಕರ್ ವಾದಿಸಿದ್ದರು.