ಕಾಸರಗೋಡು: ದೇಶದ ಏಕತೆ ಮತ್ತು ಅಖಂಡತೆ ಕಾಪಾಡುವ ನಿಟ್ಟಿನಲ್ಲಿ ಜನತೆ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಟ್ವೀಟ್ ಮಾಡಿದ ಸಚಿನ್ ತೆಂಡೂಲ್ಕರ್ ವಿರುದ್ಧ ವ್ಯಾಪಕ ಅಪಪ್ರಚಾರ ಹಾಗೂ ಯುವಕಾಂಗ್ರೆಸ್ ವತಿಯಿಂದ ಸಚಿನ್ ಕಟೌಟ್‍ಗೆ ಕರಿ ಆಯಿಲ್ ಸುರಿದ ಪ್ರಕರಣವನ್ನು ಯುವಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿ ಖಂಡಿಸಿದೆ.
ಇದರ ವಿರುದ್ಧ ಕಾಸರಗೋಡು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿತು. ಬಿಜೆಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಎನ್. ಸತೀಶ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು ಮುಂತಾದವರು ಉಪಸ್ಥಿತರಿದ್ದರು.