HEALTH TIPS

ದೆಹಲಿಯಲ್ಲಿ ಅಜಿತ್ ಧೋವಲ್ ಮೇಲೆ ದಾಳಿಗೆ ಜೆಇಎಂ ಸಂಚು: ಬಿಹಾರದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ

      ಜಮ್ಮು: ಪಾಕಿಸ್ತಾನ ಮೂಲದ ಜೈ‍ಷ್‌ ಎ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದು ಈ ಸಂಬಂಧ ಬಿಹಾರದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

      ನಿನ್ನೆಯಷ್ಟೇ ಜಮ್ಮು ಬಸ್ ನಿಲ್ದಾಣದಲ್ಲಿ 7 ಕೆಜಿ ಐಇಡಿ ಬಾಂಬ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿಲ್ಬಾಗ್ ಸಿಂಗ್ ಅವರು, ಜೈಷ್ ಇ ಮೊಹಮದ್ ತನ್ನ ಭಾರತೀಯ ಘಟಕಗಳ ಮೂಲಕ ದೆಹಲಿಯಲ್ಲಿ ದಾಳಿ ನಡೆಸಲು ಸಂಚು ನಡೆಸಿತ್ತು. ಇದರ ನೇತೃತ್ವ ವಹಿಸಿದ್ದ ಇಬ್ಬರು ಉಗ್ರರನ್ನು ಬಂಧಿಸಿಲಾಗಿದ್ದು, ದಾಳಿಯ ಸಂಚನ್ನು ವಿಫಲಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

     ಜಮ್ಮು ಕೇಂದ್ರ ಬಸ್‌ ನಿಲ್ದಾಣದಲ್ಲಿ 7 ಕೆ.ಜಿ. ಕಚ್ಚಾಬಾಂಬ್‌ ಅನ್ನೂ ಭಾನುವಾರ ವಶಕ್ಕೆ ಪಡೆಯಲಾಗಿದೆ. ನಡೆಯಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದೇವೆ.  ಜೆಇಎಂನ ಭಾರತೀಯ ಘಟಕಗಳಾಗಿ ಲಷ್ಕರ್ ಎ ಮುಸ್ತಫಾ (ಎಲ್‌ಇಎಂ) ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್‌) ಕಾರ್ಯನಿರ್ವಹಿಸುತ್ತಿವೆ. ಈ ಎರಡೂ ಉಗ್ರ ಸಂಘಟನೆಗಳ ಮುಖ್ಯಸ್ಥರಾದ ಹಿದಾಯತ್ ಉಲ್ಲಾ ಮಲಿಕ್ ಮತ್ತು ಝಹೂರ್ ಅಹ್ಮದ್ ರಾಥೆರ್ ಎಂಬ ಉಗ್ರರನ್ನು ಕಳೆದ ಒಂದು ವಾರದಲ್ಲಿ ಬಂಧಿಸಿದ್ದೇವೆ. ಈ ಕಾರ್ಯಾಚರಣೆಯ ಭಾಗವಾಗಿ ಲಭ್ಯವಾದ ನಿಖರ ಮಾಹಿತಿ ಮೇರೆಗೆ ಜಮ್ಮು ಬಸ್‌ ನಿಲ್ದಾಣದಲ್ಲಿ ಶೋಧಕಾರ್ಯ ನಡೆಸಲಾಯಿತು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries