ಕಾಸರಗೋಡು: ಜಗತ್ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಬೇಕಲದಲ್ಲಿ ಪ್ರವಾಸಿಗರಿಗಾಗಿ ಪ್ರತ್ಯೇಕ ಯೋಜನೆಗಳು ಸಿದ್ಧಗೊಂಡಿವೆ. ಪ್ರವಾಸಿಗರ ಪ್ರಯಾಣ ಮತ್ತು ಮೂಲಭೂತ ಸೌಲಭ್ಯ ಸುಧಾರಣೆಗೊಳಿಸುವ ನಿಟ್ಟಿನಲ್ಲಿ ರಚಿಸಲಾದ ಬೇಕಲ ಬೀಚ್ ಆಕ್ಸಸ್ ಡೆವೆಲಪ್ ಮೆಂಟ್ ಆಂಡ್ ಬ್ಯೂಟಿಫಿಕೇಷನ್ ಯೋಜನೆ ಮಂಗಳವಾರ ಉದ್ಘಾಟನೆಗೊಂಡಿತು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ ಲೈನ್ ರೂಪದಲ್ಲಿ ಯೋಜನೆಗೆ ಚಾಲನೆ ನೀಡಿದರು. ಪ್ರವಾಸೋದ್ಯಮ ಸಚಿವ ಕಡಕಂಪಳ್ಳಿ ಸುರೇಂದ್ರನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿದ್ದರು. ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಣಿ ಜಾರ್ಜ್ ಪ್ರಧಾನ ಭಾಷಣ ಮಾಡಿದರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಕಾಞಂಗಾಡ್ ಬ್ಲೋಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಪಳ್ಳಿಕ್ಕರೆ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಕುಮಾರನ್, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು. ಶಾಸಕ ಕೆ.ಕುಂಞÂ್ಞ ರಾಮನ್ ಸ್ವಾಗತಿಸಿದರು.