ಕಾಸರಗೋಡು: ರಾಜ್ಯ ಸರಕಾರದ ಅಂಬೇಡ್ಕರ್ ಯೋಜನೆ ಮೂಲಕ ಪರಿಶಿಷ್ಟ ಜಾತಿ-ಪಂಗಡ ಕಾಲನಿಗಳ ಮುಖಚರ್ಯೆ ಬದಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಭಿಪ್ರಾಯಪಟ್ಟರು.
ಕಾಸರಗೋಡು ಜಿಲ್ಲೆಯ ಸಹಿತ ರಾಜ್ಯದ ಒಟ್ಟು 80 ಅಂಬೇಡ್ಕರ್ ಗ್ರಾಮಗಳ ಯೋಜನೆಯನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ-ಪಂಗಡ ಜನಾಂಗದವರನ್ನು ಸಮಾಜದ ಪ್ರಧಾನ ವಾಹಿನಿಗೆ ಕರೆತರುವ ನಿಟ್ಟಿನಲ್ಲಿ ರಾಜ್ಯಸರಕಾರದ ಜನಪರ ನೀತಿಗೆ ಈ ಯೋಜನೆ ನಿದರ್ಶನವಾಗಿದೆ ಎಂದವರು ತಿಳಿಸಿದರು.
ಪರಿಶಿಷ್ಟ ಜಾತಿ-ಪಂಗಡ ಅಭಿವೃದ್ಧಿ ಸಚಿವ ಎ.ಕೆ.ಬಾಲನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂಬಂಧ ಬದಿಯಡ್ಕದ ಬಾರಡ್ಕ ಅಂಬೇಡ್ಕರ್ ಕಾಲನಿಯಲ್ಲಿ ಜರುಗಿದ ಸಮಾರಂಭದಲ್ಲಿ ಶಾಸಕ ಎನ್.ಎ.ನೆಲ್ಲಿಕುನ್ನು ಶಿಲಾಫಲಕ ಅನಾವರಣಗೊಳಿಸಿದರು. ಕಾಸರಗೋಡು ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಸಿ.ಎ.ಸೈಮಾ, ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಬಿ.ಶಾಂತಾ, ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಎಸ್.ಮೀನಾರಾಣಿ ಉಪಸ್ಥಿತರಿದ್ದರು. ಒಂದು ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರ ಯೋಜನೆಯ ನಿರ್ವಹಣೆ ನಡೆಸಿದೆ.