ಕಾಸರಗೋಡು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ ಬಿಜೆಪಿ ಮಹತ್ತರ ಮೈಲುಗಲ್ಲು ಸಾಧಿಸಬೇಕೆಂಬ ಉದ್ದೇಶದಿಂದ ರಾಜ್ಯ ಬಿಜೆಪಿ ನೇತೃತ್ವದಲ್ಲಿ ಇಂದಿನಿಂದ (ಭಾನುವಾರ) ಕಾಸರಗೋಡಿನಿಂದ ವಿಜಯ ಯಾತ್ರೆ ಆರಂಭಗೊಳ್ಳುತ್ತಿದ್ದು ಪೂರ್ವಭಾವಿಯಾಗಿ ಶನಿವಾರ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಜಿಲ್ಲೆಯ ವಿವಿಧ ಪ್ರಧಾನ ದೇವಾಲಯಗಳನ್ನು ಸಮದರ್ಶಿಸಿ ಪ್ರಾರ್ಥನೆ ಸಲ್ಲಿಸಿದರು.
ಮಧೂರು ಶ್ರೀ ಸಿದ್ದಿವಿನಾಯಕ ದೇವಾಲಯ, ಕುಂಬಳೆ ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯ, ಅನಂತಪುರ ಶ್ರೀಅನಂತಪದ್ಮನಾಭ ದೇವಾಲಯ, ಐಲ ಶ್ರೀದುರ್ಗಾಪರಮೇಶ್ವರಿ ದೇವಾಲಯ, ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮಗಳಿಗೆ ಭೇಟಿ ನೀಡಿದರು. ಈ ವೇಳೆ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್, ಬಿಜೆಪಿ ಮಂಜೇಶ್ವರ ಮಂಡಲಾಧ್ಯಕ್ಷ ಮಣಿಕಂಠ ರೈ ಪಟ್ಲ ಸಹಿತ ನೇತಾರರು ಉಪಸ್ಥಿತರಿದ್ದರು.