ನವದೆಹಲಿ: ಕೇರಳದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿಯನ್ನಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ನೇಮಿಸಲಾಗಿದೆ.
ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿಯ ಉಸ್ತುವಾರಿಯನ್ನಾಗಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಹಾಗೂ ಸಹ ಉಸ್ತುವಾರಿಯನ್ನಾಗಿ ವಿ.ಕೆ. ಸಿಂಗ್ ಅವರನ್ನು ನೇಮಿಸಲಾಗಿದೆ.
ಪುದುಚೇರಿಗೆ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಉಸ್ತುವಾರಿ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಅಸ್ಸಾಂ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಇವರ ಜತೆಗೆ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಸಹ ಉಸ್ತುವಾರಿಯಾಗಿರುತ್ತಾರೆ.