HEALTH TIPS

ಅರುಣಾಚಲ ಪ್ರದೇಶವೀಗ ಕೊರೊನಾ ವೈರಸ್‌ ಮುಕ್ತ

             ಇಟಾನಗರ: ಅರುಣಾಚಲ ಪ್ರದೇಶವು ಭಾನುವಾರ ಕೊರೊನಾ ವೈರಸ್ ಮುಕ್ತವಾಗಿದೆ. ರಾಜ್ಯಲ್ಲಿ ಮೂರು ಸಕ್ರಿಯ ಪ್ರಕರಣಗಳಿದ್ದವು. ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಹಿರಿಯ ಆರೋಗ್ಯಾಧಿಕಾರಿ ಲೋಬ್ಸಂಗ್ ಜಂಪಾ ತಿಳಿಸಿದ್ದಾರೆ.


          ರಾಜ್ಯದಲ್ಲಿ ಒಟ್ಟು 16,836 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 16,780 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

            ಕಳೆದ 24 ಗಂಟೆಗಳಲ್ಲಿ ಹೊಸ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಸೋಂಕಿನಿಂದಾಗಿ ಈವರೆಗೆ 56 ಮಂದಿ ಮೃತಪಟ್ಟಿದ್ದಾರೆ. ಅರುಣಾಚಲ ಪ್ರದೇಶದ ಕೋವಿಡ್-19 ಚೇತರಿಕೆ ಪ್ರಮಾಣ ಶೇ 99.66 ಹಾಗೂ ಸೋಂಕು ಪ್ರಕರಣಗಳ ಪ್ರಮಾಣ ಶೂನ್ಯ ಆಗಿದೆ. 4,05,647 ಮಾದರಿಗಳನ್ನು ಈವರೆಗೆ ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರ 312 ಮಾದರಿಗಳ ಪರೀಕ್ಷೆ ನಡೆಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

        ಈ ಮಧ್ಯೆ ರಾಜ್ಯದಲ್ಲಿ 32,325 ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries