HEALTH TIPS

ಕಾಸರಗೋಡಿನ ಕನ್ನಡ ಅಸ್ಮಿತೆ ಮತ್ತು ಹೋರಾಟದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು-ಎಡನೀರುಶ್ರೀ

      

         ಕಾಸರಗೋಡು: ಗಡಿನಾಡಿನ ಕನ್ನಡಪರ ಹೋರಾಟಗಳಲ್ಲಿ ಕಾಸರಗೋಡಿನ ಕನ್ನಡ ಮಾಧ್ಯಮಗಳ ಪಾತ್ರ ಮಹತ್ತರವಾದುದು ಎಂದು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ತಿಳಿಸಿದ್ದಾರೆ. ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದ ಕಾಸರಗೋಡು ಜಿಲ್ಲಾಘಟಕದ ಔಪಚಾರಿಕ ಉದ್ಘಾಟನೆ ಮತ್ತು ಕೇರಳ ಕನ್ನಡ ಪತ್ರಕರ್ತರ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಎಡನೀರು ಮಠದ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.

        ಎಡನೀರು ಮಠದ ಶಿವೈಕ್ಯ ಸ್ವಾಮೀಜಿ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರು ನಡೆಸಿಕೊಂಡು ಬರುತ್ತಿದ್ದ ಕಲಾ, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವ ಮೂಲಕ ಅವರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸಲು ಸಾಧ್ಯ. ಶ್ರೀ ಮಠದ ಚಟುವಟಿಕೆಗಳಿಗೆ ಕಾಸರಗೋಡಿನ ಕನ್ನಡ  ಮಾಧ್ಯಮಗಳು ನಿರಂತರ ಪ್ರೋತಾಹ ನೀಡುತ್ತಾ ಬಂದಿದೆ. ಕೋವಿಡ್ ಸಂಕಷ್ಟದ ನಡೆಉವೆಯೂ ಕಾಸರಗೋಡಿನ ಮಾದ್ಯಮ ಪ್ರತಿನಿಧಿಗಳು ಸ್ಲಘನಿಯ ಸೇವೆ ಸಲ್ಲಿಸಿದ್ದಾರೆ. ಗಡಿನಾಡ ಕನ್ನಡ ಮಾಧ್ಯಮ ಪತ್ರಕರ್ತರ ಸಮಸ್ಯೆಗಳಿಗೆ ಕೇರಳ ಮತ್ತು ಕರ್ನಾಟಕ ಸರ್ಕಾರ ಸ್ಪಂದಿಸಬೇಕಾಗಿದ್ದು, ಮಠದ ವತಿಯಿಂದ ಇದಕ್ಕೆ ಬೇಕಾದ ಎಲ್ಲ ಸಹಕಾರ  ನೀಡಲು ಬದ್ಧ ಎಂದು ತಿಳಿಸಿದರು.

         ಜಿಲ್ಲಾ ಘಟಕ ಅಧ್ಯಕ್ಷ ಅಬ್ದುಲ್ ರಹಮಾನ್ ಸುಬ್ಬಯ್ಯಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಎ.ಶ್ರೀನಾಥ್, ಸಂಘಟನೆ ಪದಾಧಿಕಾರಿಗಳು, ಸದಸ್ಯರು  ಉಪಸ್ಥಿತರಿದ್ದರು.  ಸದಸ್ಯ ವೀಜಿ ಕಾಸರಗೋಡು ಸ್ವಾಮೀಜಿ ಅವರನ್ನು ಪಲಪುಷ್ಪ ನೀಡಿ, ಶಾಲು ಹೊದಿಸಿ ಗೌರವಿಸಿದರು. ಕೋಶಾಧಿಕಾರಿ ಪುರುಷೋತ್ತಮ ಪೆರ್ಲ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗಂಗಾಧರ ಯಾದವ್ ತೆಕ್ಕೆಮೂಲೆ ಪ್ರಾಸ್ತಾವಿಕ ಮಾತುಗಳನ್ನಾಡಿ ವಂದಿಸಿದರು.

       ಮಾರ್ಚ್ 7ರಂದು ಬೆಳಗ್ಗೆ 9.30ಕ್ಕೆ ಸಿರಿಯ ಸನಿಹದ ಡಿ.ಎಂ ಕಬಾನ ರೆಸಾರ್ಟ್‍ನಲ್ಲಿ ಕಾರ್ಯಕ್ರಮ ಜರುಗಲಿದ್ದು, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಸೋಮಶೇಖರ್ ಉದ್ಘಾಟಿಸುವರು. ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ಈ ಸಂದರ್ಭ ಆರೋಗ್ಯ ಕಾರ್ಡು ವಿತರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ ನಡೆಯಲಿರುವುದು. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9.30ರಿಂದ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಲಿರುವುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries