ಮಂಜೇಶ್ವರ: ಗಡಿ ಗ್ರಾಮ ಮಂಜೇಶ್ವರದ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವುದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಕಾನೂನು ಮಾಹಿತಿ ಶಿಬಿರ, ಪರಿಪೂರ್ಣ ಮಾಹಿತಿ ಮತ್ತು ಸೇವಾ ಕೇಂದ್ರ ಮಾಡದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಸೀತಾರಾಮ ಆಚಾರ್ಯ ಅವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿರಿಯರಾದ ಶಂಭು ನಂಬೂದಿರಿ,ಉಮೇಶ್ ಪೂಮಣ್ಣು,ಸಂಜೀವ ಶೆಟ್ಟಿ ಮಾಡ ಉಪಸ್ಥಿತರಿದ್ದು ಪರಿಪೂರ್ಣ ವೆಲ್ಫೇರ್ ಫೌಂಡೇಶನ್ ಕಾರ್ಯಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಸಿದರು.
ಹರೀಶ್ ಶೆಟ್ಟಿ ಮಾಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸ್ಥಾಪಕ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ಮಾಡ ವಂದಿಸಿದರು.
ಪರಿಪೂರ್ಣ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಕಾನೂನು ಮಾಹಿತಿ ಶಿಬಿರ ಪ್ರತಿ ಮಂಗಳವಾರ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ಪರಿಪೂರ್ಣ ಮಾಹಿತಿ ಮತ್ತು ಸೇವಾ ಕೇಂದ್ರ ಮಾಡ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿರುವರು.