ಉಪ್ಪಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ಸಹಕಾರದೊಂದಿಗೆ ಪೈವಳಿಕೆ ಗ್ರಾಮ ಪಂಚಾಯತಿ ಹಾಗೂ ಕಂಡತ್ತಾಡ್ ಬೋಳಂಗಳ ಕೆರೆ ಅಭಿವೃದ್ಧಿ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ 318 ನೇ "ನಮ್ಮೂರ ಕೆರೆ ಹೂಳೆತ್ತುವ" ಕಾರ್ಯಕ್ರಮಕ್ಕೆ ಪೈವಳಿಕೆ ಸಮೀಪದ ಬೋಳಂಗಳ ಕಂಡತ್ತಾಡ್ ನಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಪೈವಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಕಾಯರ್ಕಟ್ಟೆ ಕುಲಾಲ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಉದ್ಘಾಟಿಸಿದರು.ಜನಜಾಗೃತಿ ವೇದಿಕೆಯ ಕಾಸರಗೋಡಿ ಜಿಲ್ಲಾಧ್ಯಕ್ಷ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶ್ವತ್ಥ ಪೂಜಾರಿ ಲಾಲ್‍ಬಾಗ್ ಅಧ್ಯಕ್ಷತೆ ವಹಿಸಿದ್ದರು. ಪೈವಳಿಕೆ ಗ್ರಾಮ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ಚಿಪ್ಪಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ನ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಬ್ಲಾಕ್ ಪಂಚಾಯತಿ ಸದಸ್ಯ ರಾಧಾಕೃಷ್ಣ ಭಟ್ ಕೆ.ವಿ., ಪೈವಳಿಕೆ ಗ್ರಾಮ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಝಡ್.ಎ.ಕಯ್ಯಾರ್, ಸದಸ್ಯೆ ಸುನಿತಾ ವಾಲ್ಟಿ ಡಿ ಸೋಜ, ಸದಸ್ಯರಾದ ಸೀತಾರಾಮ ಶೆಟ್ಟಿ, ಶ್ರೀನಿವಾಸ್ ಭಂಡಾರಿ, ಗ್ರಾಮ ಪಂಚಾಯತಿ ಅಭಿಯಂತರ ಶ್ರೀರಾಂ, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಸದಾನಂದ ಕೋರಿಕ್ಕಾರ್, ಲಾರೆನ್ಸ್ ಡಿ ಸೋಜ,ಸುಧಾಕರ ಕಳಾಯಿ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ. ಸ್ವಾಗತಿಸಿ, ಕೃಷಿ ಮೇಲ್ವಿಚಾರಕ ಸದಾಶಿವ ವಂದಿಸಿದರು. ಮೇಲ್ವಿಚಾರಕ ಅನಿಲ್ ಕುಮಾರ್ ಪಿ. ಕಾರ್ಯಕ್ರಮ ನಿರೂಪಿಸಿದರು.