ನವದೆಹಲಿ: ಸಂತ್ರಸ್ತೆಯ ಚರ್ಮದ ಜೊತೆ ಆರೋಪಿಯ ಚರ್ಮದ (ಸ್ಕಿನ್ ಟು ಸ್ಕಿನ್) ಸಂಪರ್ಕವಾಗಿರಬೇಕು ಎಂಬ ವಾದವನ್ನು ಫೋಕ್ಸೋ ಕಾಯ್ದೆಯ ವ್ಯಾಪ್ತಿಯಲ್ಲಿ ಲೈಂಗಿಕ ದೌರ್ಜನ್ಯ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ನೀಡಿರುವ ತೀರ್ಪಿನ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗವು ನೀಡಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಬುಧವಾರ ಸಮ್ಮತಿ ಸೂಚಿಸಿದೆ.
ಇದು ಈ ಹಿಂದೆ ಕಂಡು ಕೇಳರಿಯದ ತೀರ್ಪಾಗಿದ್ದು, ಇದು ಭವಿಷ್ಯದಲ್ಲಿ ಅಪಾಯಕಾರಿ ನಿದರ್ಶನವಾಗಲಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ವಾದಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಜನವರಿ 27ರಂದು ಸುಪ್ರೀಂ ಕೋರ್ಟ್ ತಡೆ ಹಿಡಿದಿತ್ತು.