ತಿರುವನಂತಪುರ: ರಾಜ್ಯದ ಹೊಸ ಮುಖ್ಯ ಕಾರ್ಯದರ್ಶಿಯಾಗಿ ವಿ.ಪಿ.ಜಾಯ್ ಅವರನ್ನು ನೇಮಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಾಯ್ ಅಧಿಕೃತವಾಗಿ ಬಿಸ್ವಾಸ್ ಮೆಹ್ತಾ ಅವರಿಂದ ಅಧಿಕಾರ ವಹಿಸಿಕೊಂಡರು. ಅವರು 1987 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.
ವಿಧಾನಸಭಾ ಚುನಾವಣೆಗೆ ಮೊದಲು ಹೊಸ ಮುಖ್ಯ ಕಾರ್ಯದರ್ಶಿಯಾಗಿ ಜಾಯ್ ಅಧಿಕಾರ ವಹಿಸಿಕೊಂಡಿರುವುದು ಮಹತ್ವದ್ದಾಗಿದೆ. ಇವರು ಕೇರಳದ 47 ನೇ ಮುಖ್ಯ ಕಾರ್ಯದರ್ಶಿಯಾಗಿರುವರು. ಹಸ್ತಾಂತರ ಸಮಾರಂಭದಲ್ಲಿ ಇತರ ಐಎಎಸ್ ಅಧಿಕಾರಿಗಳು ಭಾಗವಹಿಸಿದ್ದರು.