ನವದೆಹಲಿ: ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಂಗ ವಿರುದ್ಧ ಪಿತೂರಿ ನಡೆದಿದೆಯೇ ಎಂದು 2019ರಲ್ಲಿ ಸುಪ್ರೀಂ ಕೋರ್ಟ್ ಆರಂಭಿಸಿದ್ದ ಸ್ವಯಂ ಪ್ರೇರಿತ ತನಿಖೆಯನ್ನು ಗುರುವಾರ ಮುಕ್ತಾಯಗೊಳಿಸಿದೆ.
ಮಾಜಿ ಮುಖ್ಯ ನ್ಯಾಯಮೂರ್ತಿ ಗೊಗೊಯ್ ವಿರುದ್ಧ ಪಿತೂರಿ ನಡೆದಿರಬಹುದಾದ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಎ ಕೆ ಪಾಟ್ನಾಯಕ್ ನೇತೃತ್ವದ ಏಕ ಸದಸ್ಯ ನ್ಯಾಯಾಂಗ ಸಮಿತಿ ಸಲ್ಲಿಸಿದ ವರದಿ ಹೇಳಿದೆ.
ಮಾಜಿ ಮುಖ್ಯ ನ್ಯಾಯಮೂರ್ತಿ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಪ್ರಕರಣ ನ್ಯಾಯಾಂಗದಲ್ಲಿ ತನಿಖೆಯಲ್ಲಿ ಎರಡು ವರ್ಷಗಳು ಕಳೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯುನ್ಮಾನ ದಾಖಲೆಗಳನ್ನು ಸಾಕ್ಷಿಯಾಗಿ ಪಡೆಯುವ ಸಾಧ್ಯತೆ ತೀರಾ ಕಡಿಮೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೊಗೊಯ್ ವಿರುದ್ಧ ಪಿತೂರಿ ನಡೆಸಲಾಗಿತ್ತೇ ಎಂದು ತನಿಖೆ ಮಾಡಲು ವಾಟ್ಸಾಪ್ ಮೆಸೇಜ್ ಗಳಂತಹ ಎಲೆಕ್ಟ್ರಾನಿಕ್ ದಾಖಲೆಗಳನ್ನು ನಿವೃತ್ತ ನ್ಯಾಯಮೂರ್ತಿ ಎ ಕೆ ಪಾಟ್ನಾಯಕ್ ನೇತೃತ್ವದ ಸಮಿತಿ ಪಡೆಯಲು ವಿಫಲವಾಗಿದೆ ಎಂದು ಸಹ ಸುಪ್ರೀಂ ಕೋರ್ಟ್ ಇಂದು ಹೇಳಿದೆ.