ನವದೆಹಲಿ: 2019 ರಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಜನರ ಮೇಲಿನ ಅಪರಾಧಗಳು ಕ್ರಮವಾಗಿ ಶೇಕಡಾ 7.3 ಮತ್ತು ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು,'ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿರುದ್ಧ ಪ್ರಕರಣಗಳು ಹೆಚ್ಚಾಗಿರುವುದು ನಿಜ. ಆದರೆ ಪೊಲೀಸರು ಮತ್ತು ಸಾರ್ವಜನಿಕ ಕಾನೂನು ವ್ಯವಸ್ಥೆ, ಜೀವ ಮತ್ತು ಆಸ್ತಿ ಸಂರಕ್ಷಣೆ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡದ (ಎಸ್‌ಟಿ) ಮೇಲಿನ ಅಪರಾಧಗಳ ಬಗೆಗಿನ ತನಿಖೆ ರಾಜ್ಯ ಸರ್ಕಾರದ ಜವಬ್ದಾರಿಯಾಗಿದೆ' ಎಂದು ಹೇಳಿದರು.
'ಕೇಂದ್ರ ಸರ್ಕಾರವು 1989ರ ಎಸ್‌ಸಿ, ಎಸ್‌ಟಿ ವಿರುದ್ಧದ ಅಪರಾಧ ತಡೆ ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಗೊಳಿಸಲು 2015ರಲ್ಲಿ ತಿದ್ದುಪಡಿಯನ್ನು ಮಾಡಿದೆ' ಎಂದು ಅವರು ಹೇಳಿದರು.