ಕಾಸರಗೋಡು: ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಪ್ರದೇಶದಲ್ಲಿ ನಿಯಂತ್ರಣ ಬಿಗುಗೊಳಿಸಿದ ಕರ್ನಾಟಕ ಸರ್ಕಾರದ ತೀರ್ಮಾನ ಖಂಡಿಸಿ ಮಂಗಳವಾರ ಕರಂದಕ್ಕಾಡಿನಲ್ಲಿ ಬಿಎಂಎಸ್ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದರು. ಬಿಎಂಎಸ್ ಕಾಸರಗೋಡು ವಲಯ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಸ್ತೆ ಸಾರಿಗೆ ಬಸ್ ತಡೆದು ಪ್ರತಿಭಟನೆ ಸೂಚಿಸಿದರು. ಬಿಎಂಎಸ್ ಕಾಸರಗೋಡು ಜಿಲ್ಲಾ ಸಮಿತಿ ಉಪಾಧ್ಯಕ್ಷ ಎ.ಮುರಳೀಧರನ್ ಧರಣಿ ಉದ್ಘಾಟಿಸಿದರು. ಜಿಲ್ಲಾ ಸಮಿತಿ ಉಪಾಧ್ಯಕ್ಷ ಪಿ. ದಿನೇಶ್ ಅಧ್ಯಕ್ಷತೆ ವಹಿಸಿದ್ದ್ರು. ಪಿ.ಎ ರಮೇಶ್, ವಿಶ್ವನಾಥ ಶೆಟ್ಟಿ, ಬಾಲಕೃಷ್ಣನ್, ಹರೀಶ್, ಬಾಬುಮೋನ್ ಮುಂತಾದವರು ನೇತೃತ್ವ ನೀಡಿದ್ದರು.