ಮಂಜೇಶ್ವರ: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೆÇೀರ್ಟ್ ಕಡ್ಡಾಯಗೊಳಿಸಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದ್ದು, ಸೋಮವಾರದಿಂದ ಕರ್ನಾಟಕ-ಕೇರಳ ರಾಜ್ಯದ ಗಡಿಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು ಬಿಗಿ ತಪಾಸಣೆ ನಡೆಸಿದರು.
ತಲಪಾಡಿ ಚೆಕ್ ಪೆÇೀಸ್ಟ್ ನಲ್ಲಿ ತಪಾಸಣೆ ನಡೆಯುತ್ತಿದ್ದು, ಇದಕ್ಕೆ ಕೇರಳ ರಾಜ್ಯದವರಿಂದ ತೀವ್ರ ಪ್ರತಿರೋಧ ವ್ಯಕ್ತವಾಯಿತು. ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಕೇರಳದ ವಾಹನಗಳನ್ನು ತಪಾಸಣೆಗೊಳಪಡಿಸಿದರು. ಆದರೆ ಇದಕ್ಕೆ ಪ್ರತಿರೋಧ ಒಡ್ಡಿರುವ ಕೇರಳದ ಕೆಲವು ಸಂಘಟನೆಗಳು, ಕರ್ನಾಟಕ ರಾಜ್ಯದ ವಾಹನಗಳನ್ನು ತಲಪಾಡಿ ಗಡಿಯಲ್ಲಿ ತಡೆದು ಪ್ರತಿಭಟನೆ ನಡೆಸಿದವು.
ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸೇರಿದಂತೆ ಕರ್ನಾಟಕದ ಎಲ್ಲಾ ವಾಹನಗಳು ಕೇರಳವನ್ನು ಪ್ರವೇಶಿಸಲಾಗದೆ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂತು. ಕೇರಳದ ಆಂಬ್ಯುಲೆನ್ಸ್ ಸೇರಿದಂತೆ ತುರ್ತು ವಾಹನಗಳನ್ನು, ವಿದ್ಯಾರ್ಥಿಗಳನ್ನು ಕೂಡ ಕರ್ನಾಟಕ ರಾಜ್ಯದಲ್ಲಿ ತಡೆ ಹಿಡಿಯುತ್ತಿರುವುದರಿಂದ ಕೇರಳಕ್ಕೆ ಕರ್ನಾಟಕದ ಒಂದೇ ಒಂದು ವಾಹನ ಪ್ರವೇಶಿಸಲು ಬಿಡುವುದಿಲ್ಲವೆಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದು, ಕರ್ನಾಟಕದ ಎಲ್ಲಾ ವಾಹನಗಳನ್ನು ತಡೆಹಿಡಿದರು. ಕರ್ನಾಟಕ ಸರ್ಕಾರ ತಕ್ಷಣ ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಮತ್ತು ಸಮಸ್ಯೆಯನ್ನು ಬಗೆಹರಿಸಬೇಕೆಂದು ಪ್ರತಿಭಟನಾ ನಿರತ ಕನ್ನಡಿಗರು ಒತ್ತಾಯಿಸಿದರು.
ಮುಖಂಡರಾದ ಹರ್ಷಾದ್ ವರ್ಕಾಡಿ, ಎ.ಕೆ.ಎಂ.ಅಶ್ರಫ್ ಸಹಿತ ಅನೇಕರು ಪ್ರತಿಭಟನೆ ನೇತೃತ್ವ ವಹಿಸಿದ್ದರು.