ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸಿದ್ದಾರೆ.
ಡೀಸೆಲ್ ಮೇಲೆ 4 ರೂ ಮತ್ತು ಪೆಟ್ರೋಲ್ ಮೇಲೆ 2.5 ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ವಿಧಿಸಲಾಗಿದೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ಹೇರಿದ್ರೂ ಸಹ ಇತರೆ ತೆರಿಗೆ ಮತ್ತು ಸೆಸ್ ಅನ್ನು ಪರಿಷ್ಕರಿಸಿರುವುದರಿಂದ ಗ್ರಾಹಕರ ಮೇಲೆ ಯಾವುದೇ ಹೊರೆ ಬೀಳುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ಧಾರೆ.
"ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ (ಎಐಡಿಸಿ) ಹೇರುವ ಮುನ್ನ, ಮೂಲ ಅಬಕಾರಿ ಸುಂಕ ಮತ್ತು ವಿಶೇಷ ಹೆಚ್ಚುವರಿ ಅಬಕಾರಿ ಸುಂಕದ ದರವನ್ನು ಕಡಿಮೆ ಮಾಡಲಾಗಿದೆ’, ಹಾಗಾಗಿ, ಗ್ರಾಹಕರ ಮೇಲೆ ಸೆಸ್ ಭಾರ ಬೀಳುವುದಿಲ್ಲ ಎಂದು ಅವರು ಹೇಳಿದ್ಧಾರೆ.