ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯತ್ ವರ್ಕಿಂಗ್ ಗ್ರೂಪ್ ಮಹಾಸಭೆ ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ಗೀತಾ ಬಾಲಕೃಷ್ಣನ್ ಯೋಜನೆಯ ಕುರಿತು ಮಾಹಿತಿ ನೀಡಿದರು. ವಿವಿಧ ಸ್ಥಾಯೀ ಸಮಿತಿ ಅಧ್ಯಕ್ಷರಾದ ಕೆ.ಶಕುಂತಲಾ, ನ್ಯಾಯವಾದಿ ಎಸ್.ಎನ್.ಸರಿತಾ, ಷಿನೋಜ್ ಚಾಕೋ, ಕಾಞಂಗಾಡ್ ಬ್ಲೋಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಜಿಲ್ಲಾ ಪಂಚಾಯತ್ ಯೋಜನೆ ಸಮಿತಿ ಉಪಾಧ್ಯಕ್ಷ ಡಾ.ಸಿ.ತಂಬಾನ್ ಉಪಸ್ಥಿತರಿದ್ದರು.
ಈ ಸಂದರ್ಭ ವರ್ಕಿಂಗ್ ಗ್ರೂಪ್ ಗಳ ಚರ್ಚೆ ನಡೆಯಿತು. ಕ್ರೋಡೀಕರಣನಡೆಸಿದ ಮಾಹಿತಿಯನ್ನು ಪ್ರಸ್ತುತಪಡಿಸಲಾಯಿತು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪಾದೂರು ಷಾನವಾಝ್ ಸ್ವಾಗತಿಸಿದರು. ಕಾರ್ಯದರ್ಶಿ ಪಿ.ನಂದಕುಮಾರ್ ವಂದಿಸಿದರು.