ಪೆರ್ಲ: ಪಡ್ರೆಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲ ಇದೆ ಹದಿನಾರನೇ ವರ್ಷದ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾಬನ ಹಾಗೂ ಮಕ್ಕಳ ಯಕ್ಷಗಾನ ಬಯಲಾಟ ಕಾರ್ಯಕ್ರಮ ಫೆ.26 ರಿಂದ 28ರ ವರೆಗೆ ಪೆರ್ಲದ ಪಡ್ರೆಚಂದು ಸ್ಮಾರಕ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಇಂದು(ಶುಕ್ರವಾರ)ಬೆಳಿಗ್ಗೆ 9ಕ್ಕೆ ಶ್ರೀಗಣಪತಿ ಹೋಮ, 10 ರಿಂದ ಶ್ರೀಸತ್ಯನಾರಾಯಣ ಪೂಜೆ, 10.30ಕ್ಕೆ ಪೆರ್ವೊಡಿ ವಿವೇಕಾನಂದ ಸಾಂಸ್ಕøತಿಕ ಕೇಂದ್ರದವರಿಂದ ಭಜನಾ ಕಾರ್ಯಕ್ರಮ, ಅಪರಾಹ್ನ 3.30 ರಿಂದ ಎನ್.ಕೆ. ರಾಮಚಂದ್ರ ಭಟ್ ಪನೆಯಾಲ ಅವರಿಂದ ಏಕಪಾತ್ರ ಯಕ್ಷಗಾನ ಬಾಹುಕ ಪ್ರದರ್ಶನ ಗೊಳ್ಳಲಿದೆ. ಸಂಜೆ 4 ರಿಂದ ಕೇಂದ್ರದ ವಿದ್ಯಾರ್ಥಿಗಳಿಂದ ರಂಗಪ್ರವೇಶ- ಯಜ್ಞ ಸಂರಕ್ಷಣೆ, ಸೀತಾಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ.
ಫೆ.27 ರಂದು ಬೆಳಿಗ್ಗೆ 9.30 ರಿಂದ ಪೂರ್ವರಂಗ, 10.30 ರಿಂದ ಯಕ್ಷಗಾನ ಬಯಲಾಟ ಪಾಂಚಜನ್ಯ, ಮಧ್ಯಾಹ್ನ 1 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಎಡನೀರು ಮಠಾಧೀಶ ಶ್ರೀಕೇಶವಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡುವರು. ಉಪನ್ಯಾಸಕ, ಯಕ್ಷಗಾನ ಕಲಾವಿದ ಕೆ.ರಾಮಚಂದ್ರ ಭಟ್ ಪನೆಯಾಲ ಅಧ್ಯಕ್ಷತೆ ವಹಿಸುವರು.ಕರ್ನಾಟಕ ಬ್ಯಾಂಕ್ ಮಂಗಳೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕ ಜಗದೀಶ್ ಬಲ್ಲಾಳ್ ಜಿ. ಅಧ್ಯಕ್ಷತೆ ವಹಿಸುವರು. ಹಿರಿಯ ಮದ್ದಳೆಗಾರ ಚಂದ್ರಶೇಖರ ಭಟ್ ಕೊಂಕಣಾಜೆ, ಶಿಕ್ಷಕ ದೇವದಾಸ್ ಅರ್ಕುಳ, ಅರವಿಂದ ಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಈ ಸಂದರ್ಭ ಹಿರಿಯ ಯಕ್ಷಗಾನ ಕಲಾವಿದ ಕೃಷ್ಣ ಗಾಣಿಗ ಅವರಿಗೆ ಪಡ್ರೆಚಂದು ಪ್ರಶಸ್ತಿ, ಮಂಜುನಾಥ ಭಟ್ ಬೆಳ್ಳಾರೆ ಅವರಿಗೆ ಅಡ್ಕಸ್ಥಳ ಪ್ರಶಸ್ತಿ, ಶಂಭು ಶರ್ಮ ವಿಡ್ಲ ಅವರಿಗೆ ವಿಶೇಷ ಪ್ರಶಸ್ತಿ, ಪದ್ಯಾಣ ಗಣಪತಿ ಭಟ್ ಅವರಿಗೆ ತೆಂಕಬೈಲು ಪ್ರಶಸ್ತಿ, ಪದ್ಯಾಣ ಶಂಕರನಾರಾಯಣ ಭಟ್ ಅವರಿಗೆ ಕಾಮತ್ ಪ್ರಶಸ್ತಿ, ಜಯಂತ ಜೋಗಿ ಅವರಿಗೆ ದೇವಕಾನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕೋಟೆ ರಾಮ ಭಟ್ ಅಭಿನಂದನಾ ಭಾಷಣ ಮಾಡುವರು. ಬಳಿಕ ಮೇದಿನಿ ನಿರ್ಮಾಣ ಮಹಿಷ ವಧೆ ಯಕ್ಷಗಾನ ಬಯಲಾಟ ಪ್ರದರ್ಶನ ಕೇಂದ್ರದ ವಿದ್ಯಾರ್ಥಿಗಳಿಂದ ನಡೆಯಲಿದೆ.
ಫೆ.28 ರಂದು ಬೆಳಿಗ್ಗೆ 10.30ಕ್ಕೆ ಪಂಚವಟಿ ಆಖ್ಯಾಯಿಕೆಯ ಬಯಲಾಟ, ಮಧ್ಯಾಹ್ನ 2.30 ರಿಂದ ಸುಂದೋಪಸುಂದ, 4.30 ರಿಂದ ಕೃಷ್ಣಾರ್ಜುನ ಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ.