ಕೋಯಿಕ್ಕೋಡ್ ರೈಲು ನಿಲ್ದಾಣದಲ್ಲಿ 117 ಜಿಲೆಟಿನ್ ಕಡ್ಡಿಗಳು, 350 ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸ್ಪೋಟಕಗಳನ್ನು ಚೆನ್ನೈ-ಮಂಗಳೂರು ಸೂಪರ್ ಎಕ್ಸ್‌ಪ್ರೆಸ್ ರೈಲಿನ ಸೀಟಿನ ಅಡಿಯಲ್ಲಿ ಇಡಲಾಗಿತ್ತು.
ಸ್ಪೋಟಕಗಳನ್ನು ಸಾಗಿಸುತ್ತಿದ್ದ ಚೆನ್ನೈ ಮೂಲದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ. ತಲಸ್ಸೆರಿಯಿಂದ ಮಹಿಳೆ ಚೆನ್ನೈಗೆ ಪ್ರಯಾಣಿಸುತ್ತಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ರೈಲ್ವೆ ಪೊಲೀಸರು ತಪಾಸಣೆ ನಡೆಸುವ ಸಂದರ್ಭದಲ್ಲಿ ರೈಲಿನ ಡಿ 1 ಕಂಪಾರ್ಟ್‌ಮೆಂಟ್‌ನಲ್ಲಿ ಸ್ಪೋಟಕಗಳು ಪತ್ತೆಯಾಗಿವೆ. ಮಹಿಳೆಯನ್ನು ವಿಚಾರಣೆ ನಡೆಸಿದ ಬಳಿಕ ಪೊಲೀಸರು ಹೆಚ್ಚಿನ ಮಾಹಿತಿಯನ್ನು ನೀಡಲಿದ್ದಾರೆ.
ಗುರುವಾರ ಸಂಜೆ ಮುಂಬೈನಲ್ಲಿರುವ ಮುಕೇಶ್ ಅಂಬಾನಿಯ ಐಷಾರಾಮಿ ನಿವಾಸದ ಬಳಿ ಕಾರಿನಲ್ಲಿ ಸ್ಪೋಟಕಗಳು ಪತ್ತೆಯಾಗಿತ್ತು. ಕಾರ್ಮಿಚೆಲ್ ರಸ್ತೆಯಲ್ಲಿ ಬಹಳ ಹೊತ್ತಿನಿಂದ ನಿಂತಿದ್ದ ಕಾರಿನ ಬಗ್ಗೆ ಅಂಬಾನಿ ಮನೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನಲ್ಲಿ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.