ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಭಾನುವಾರ ರೂಪಾನಿ ಅವರು ರಾಜ್ಯದಲ್ಲಿ ಮುಂಬರುವ ನಾಗರಿಕ ಸಮಿತಿಗಳ ಚುನಾವಣೆಗಳಿಗಾಗಿ ವಡೋದರಾದ ನಿಜಾಂಪುರ ಪ್ರದೇಶದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದರು. ನಂತರ ಅವರನ್ನು ಅಹಮದಾಬಾದ್‌ಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ರೂಪಾನಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ವೇಳೆ ಪ್ರಧಾನಿ ರೂಪಾನಿಯವರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಮತ್ತು ವಿಶ್ರಾಂತಿ ಪಡೆಯಲು ಸೂಚಿಸಿದ್ದರು.