ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 13,742 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. 104 ಮಂದಿ ಮೃತಪಟ್ಟಿದ್ದು, 14,037 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 1,10,30,176 ಆಗಿದೆ. ಈ ಪೈಕಿ 1,56,567 ಮಂದಿ ಮೃತಪಟ್ಟಿದ್ದು, 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ.
ಸದ್ಯ ದೇಶದಲ್ಲಿ 1,46,907 ಸಕ್ರಿಯ ಪ್ರಕರಣಗಳಿವೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ.
ಈವರೆಗೆ ಒಟ್ಟು 1,21,65,598 ಮಂದಿಗೆ ಕೋವಿಡ್-19 ವಿರುದ್ಧ ಲಸಿಕೆ ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಕಾರ್ಯಕ್ರಮ ದೇಶದೆಲ್ಲೆಡೆ ಚಾಲ್ತಿಯಲ್ಲಿದೆ. ಶೀಘ್ರದಲ್ಲೇ 50 ವರ್ಷಕ್ಕಿಂತ ಹೆಚ್ಚು ವಯಸ್ಸಾದವರಿಗೂ ಲಸಿಕೆ ನೀಡಿಕೆ ಆರಂಭವಾಗುವ ನಿರೀಕ್ಷೆ ಇದೆ.