ಮುಂಬೈ: ಮಹಾ ಶಿವರಾತ್ರಿಯ ಸಂಭ್ರಮದಲ್ಲಿರುವ ಮಹಾರಾಷ್ಟ್ರದ ನಾಗ್ಪುರ ನಗರದ ಜನತೆಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಮಾರ್ಚ್ 15ರಿಂದ 21ರವರೆಗೆ ನಾಗ್ಪುರದಲ್ಲಿ ಲಾಕ್ಡೌನ್ನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಾಗ್ಪುರ ಒಂದೇ ನಗರದಲ್ಲಿ ಬುಧವಾರದಂದು 1800ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಆ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಘೋಷಣೆ ಮಾಡಿರುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕರೊನಾ ಹರಡುತ್ತಿರುವ ಬಗೆಯನ್ನು ಗಮನಿಸಿಕೊಂಡು ಬೇರೆ ನಗರಗಳಲ್ಲೂ ಲಾಕ್ಡೌನ್ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಂದೇ ದಿನದಲ್ಲಿ 13,500ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈಗಾಗಲೇ ಹಲವು ಸ್ಥಳಗಳಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಮಾತ್ರವೇ ಅವಕಾಶ ಕೊಡಲಾಗುತ್ತಿದೆ.