ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,286 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ ಮಹಾಮಾರಿ ವೈರಸ್ 91 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,57,248ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟಾರೆ 1,11,24,527 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 12,464 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,07,98,921ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 1,68,358 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಭಾರತದಲ್ಲಿ ಒಂದೇ ದಿನ 7,59,283 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 21,76,18,057 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,48,54,136ಮಂದಿಗೆ ಲಸಿಕೆಯನ್ನು ನೀಡಲಾಗಿದ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.